Posts Slider

Karnataka Voice

Latest Kannada News

ವಿಶ್ವೇಶ್ವರನಗರದಲ್ಲಿ ಮಹಿಳೆ ನೇಣಿಗೆ ಶರಣು…!

1 min read
Spread the love

ಹುಬ್ಬಳ್ಳಿ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ತಮ್ಮ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ವಿಶ್ವೇಶ್ವರ ನಗರದ 58 ವರ್ಷದ ಶಾಂತಾ ಎಂಬ ಮಹಿಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣಿಗೆ ಶರಣಾಗಿದ್ದಾಳೆ. ಕಳೆದ ಮೂರು ದಿನಗಳ ಹಿಂದೆ ಕೂಡಾ ಮನೆಯಲ್ಲಿನ ಗಲಾಟೆ ವಿಷಯ ಅಶೋಕ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.

ಮನೆಯಲ್ಲಿನ ಸ್ಥಿತಿ ಸುಧಾರಣೆಯಾಗದ ಹಿನ್ನೆಲೆಯಲ್ಲಿ ಮಹಿಳೆಯು ನೇಣಿಗೆ ಶರಣಾಗಿದ್ದಾರೆಂದು ಹೇಳಲಾಗಿದೆ.

ಮಹಿಳೆಯು ನೇಣಿಗೆ ಶರಣಾಗಿರುವ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ.  

ಅಶೋಕ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed