ಗದಗ-ರಾಣೆಬೆನ್ನೂರು ಬಸ್ ಪಲ್ಟಿ 50ಕ್ಕೂ ಜನರು…!

ಹಾವೇರಿ: ಗದಗನಿಂದ ಬರುತ್ತಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಛತ್ರದ ಬಳಿಯಲ್ಲಿ ಪಲ್ಟಿಯಾಗಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ರಕ್ತಸಿಕ್ತವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗದಗನಿಂದ ಬರುತ್ತಿದ್ದ ವೇಳೆಯಲ್ಲಿ ಛತ್ರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಬಸ್ ಪಲ್ಟಿಯಾಗಿದ್ದರಿಂದ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ.

ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸಿನ ಬ್ರೇಕ್ ಫೇಲಾಗಿ ಪಲ್ಟಿಯಾಗಿದ್ದು, ಘಟನೆಯಲ್ಲಿ ತಾಸಿಗೂ ಹೆಚ್ಚು ಸಮಯ ರಸ್ತೆಯಲ್ಲಿಯೇ ನರಳಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಘಟನೆಗೆ ಸಂಬಂಧಿಸಿದ ಹಾಗೇ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಲಾಗಿದೆ.