ಮಾಜಿ ಪ್ರಧಾನಿ ದೇವೇಗೌಡ ದಂಪತಿಗಳಿಗೆ ಕೊರೋನಾ ಸೋಂಕು-ಆಸ್ಪತ್ರೆಗೆ ದಾಖಲು..!

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೆ ಅವರ ಪತ್ನಿ ಚೆನ್ನಮ್ಮ ಅವರಿಗೂ ಕೂಡ ಕೊರೋನಾ ಪಾಸಿಟಿವ್ ಬಂದಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೇವೇಗೌಡ ದಂಪತಿಯನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾದೆ.
ಈ ಕುರಿತು ಹೆಚ್ .ಡಿ. ದೇವೇಗೌಡ ಅವರು, ನನಗೆ ಮತ್ತೆ ನಂ ಹೆಂಡತಿ ಚೆನ್ನಮ್ಮಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಮತ್ತೆ ನನ್ನ ಕುಟುಂಬದವರು ಐಸೋಲೇಟೆಡ್ ಆಗಿದ್ದೇವೆ. ಕಳೆದ ಐದು ದಿನಗಳಿಂದ ಯಾರು ನನ್ನ ಸಂಪರ್ಕಕ್ಕೆ ಬಂದಿದ್ದೀರಾ ಅವರೆಲ್ಲ ದಯವಿಟ್ಟು ಪರುಕ್ಷೇ ಮಾಡಿಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರಲ್ಲಿ ಮತ್ತು ನನ್ನ ಹಿತೈಷಿಗಳು ಯಾವುದೇ ಕಾರಣಕ್ಕೂ ಗಾಭರಿಗೊಳ್ಳಬೇಡಿ ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಈ ಕುರಿತು ಪ್ರಧಾನಿ ಮೋದಿ, ನಾನು ಮಾಜಿ ಪ್ರಧಾನಿ ದೇವೇಗೌಡ ಅವ್ರಿಗೆ ಕರೆ ಮಾಡಿ, ಪತ್ನಿ ಮತ್ತು ಅವರ ಆರೋಗ್ಯದ ಕುರಿತು ವಿಚಾರಿಸಿದ್ದೇನೆ. ಅವರ ಪತ್ನಿಯ ಆರೋಗ್ಯವು ಚೆನ್ನಾಗಿದೆ ಎಂದು ಹೇಳಿದ್ದಾರೆ. ಆದಷ್ಟು ಬೇಗ ಅವರು ಆರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ಆ ದೇವರಲ್ಲಿ ಕೇಳಿಕೊಳ್ಳುತೇನೆ ಎಂದು ಟ್ವೀಟ್ ಮಾಡಿದ್ದಾರೆ.