Posts Slider

Karnataka Voice

Latest Kannada News

ದ್ವೀತಿಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ…!

1 min read
Spread the love

ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶಿಕ್ಷಣ ಸಚಿವ ಸುರೇಶ್‍ಕುಮಾರ್ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಏಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.

ಅಲ್ಲದೇ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕೂಡ, 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

Leave a Reply

Your email address will not be published. Required fields are marked *