ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕೊರೋನಾ ಪಾಸಿಟಿವ್…!

ಹುಬ್ಬಳ್ಳಿ: ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಬಂದಿದ್ದು, ರೋಗ ಲಕ್ಷಣಗಳು ಕಂಡು ಬಂದಿಲ್ಲ. ಕೋವಿಡ್ ನಿಯಮಾವಳಿಗಳ ಪ್ರಕಾರ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯವಾಗಿದ್ದಾರೆ ಸಭಾಪತಿ ಬಸವರಾಜ ಹೊರಟ್ಟಿಯವರ ಆಪ್ತ ಸಹಾಯಕರು ಮಾಹಿತಿಯನ್ನ ನೀಡಿದ್ದಾರೆ.