ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿ ಕೋವಿಡ್-19ಗೆ ಬಲಿ…!
1 min readಹುಬ್ಬಳ್ಳಿ: ಹಲವು ದಿನಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದ ಧಾರವಾಡ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಇಂದು ಹುಬ್ಬಳ್ಳಿಯ ಕಿಮ್ಸನಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
45 ವಯಸ್ಸಿನ ಮಾರುತಿ ಕಟ್ಟಿಮನಿ ಎಂಬುವವರೇ ಹುಬ್ಬಳ್ಳಿನ ಕಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಂದು ನಸುಕಿನ ಜಾವ 6 ಗಂಟೆ ಸುಮಾರಿಗೆ ಸಾವಿಗೀಡಾಗಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ “ಡ” ವರ್ಗದಲ್ಲಿ ಕೆಲಸ ಮಾಡಿಕೊಂಡಿದ್ದ ಮಾರುತಿ ಕಟ್ಟಿಮನಿ, ಸುಮಾರು 10 ದಿನಗಳಿಂದ ಕೊರೋನಾ ಪಾಸಿಟಿವ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು.
ಹೊರಗಡೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಮಾರುತಿ ಕಟ್ಟಿಮನಿ, ಕಳೆದ 5 ವರ್ಷದಿಂದ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.