ವರೂರು ಬಳಿ ಭೀಕರ ಅಪಘಾತ- ಇಬ್ಬರ ಸ್ಥಿತಿ ಗಂಭೀರ

ಹುಬ್ಬಳ್ಳಿ : ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಕೀಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮುಂಡಗೋಡ ಮೂಲದ ಬೈಕ್ ಸವಾರರು ದಾಬಾಗಳಿಗೆ ಪರೋಟಾ ಹಂಚುವ ಕಾರ್ಯವನ್ನು ಮಾಡಿ ಮರಳಿ ಮುಂಡಗೋಡ ಕ್ಕೇ ಹೋಗುವಾಗ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಲಿಯಲ್ಲಿನ ರಾಜಸ್ತಾನ ದಾಬಾ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಕಾರು ಹಾವೇರಿ ಕಡೆಯಿಂದ ಬೆಳಗಾವಿ ಕಡೆಗೆ ಹೊರಟಾಗ ಈ ಘಟನೆ ನಡೆದಿದ್ದು ಘಟನೆಯಲ್ಲಿ ಒಬ್ಬ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಇಬ್ಬರನ್ನು ಕೀಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ