ರಾಜ್ಯದಲ್ಲಿಂದು 6815 ಪಾಸಿಟಿವ್-15409 ಗುಣಮುಖ: 120 ಸೋಂಕಿತರ ಸಾವು…!

ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನವೂ ಹೊಸ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಇಂದು 6815 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 15409 ಸೋಂಕಿತರು ಗುಣಮುಖರಾಗಿದ್ದಾರೆ. 120 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ ಮೈಸೂರು ಜಿಲ್ಲೆಯಲ್ಲಿ ಅತಿ ಹೆಚ್ಚು 25 ಸಾವುಗಳು ಸಂಭವಿಸಿದ್ದು, ಬೆಂಗಳೂರು ನಗರದಲ್ಲಿ 1470 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದ ಸಂಪೂರ್ಣ ವಿವರ ಇಲ್ಲಿದೆ ನೋಡಿ..

ಧಾರವಾಡ ಜಿಲ್ಲೆಯಲ್ಲಿ 101 ಕೊರೋನಾ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 220 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೂಡಾ 10 ಸೋಂಕಿತರು ಸಾವಿಗೀಡಾಗಿದ್ದಾರೆ.