Posts Slider

Karnataka Voice

Latest Kannada News

ರಾಜ್ಯದಲ್ಲಿ ಅನ್ ಲಾಕ್ 3.0- ಮದುವೆಗೆ 100ಮಂದಿ, ಅಂತ್ಯಸಂಸ್ಕಾರಕ್ಕೆ 20ಜನ: ರೂಲ್ಸನಲ್ಲಿ ಏನೇನು ಇದೆ ಗೊತ್ತಾ…!

1 min read
Spread the love

ಬೆಂಗಳೂರು: ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸಿದೆ.

ಅದರಂತೆ ದೇವಾಲಯ, ಬಾರ್, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಅಲ್ಲದೆ ರಾಜ್ಯದಲ್ಲಿ ಇದುವರೆಗೆ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ವನ್ನು ತೆಗೆದು ಹಾಕಲಾಗಿದೆ.

ಕೊರೋನಾ ಉಸ್ತುವಾರಿ ಸಚಿವರು, ಟಾಸ್ಕ್ ಫೋರ್ಸ್ ಸದಸ್ಯರು ಮತ್ತು ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ,ಎಸ್. ಯಡಿಯೂರಪ್ಪ, ಜುಲೈ 5ರಿಂದ 19ರವರೆಗೆ ಈ ಮಾರ್ಗಸೂಚಿ ಅನ್ವಯವಾಗಲಿದೆ. ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

ಯಾವುದೆಲ್ಲಾ ಸಡಿಲಿಕೆ

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

9. ಕೊರೋನಾ ಕರ್ಫ್ಯೂ (Night curfew) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

10. ವಾರಾಂತ್ಯದ ಕರ್ಫ್ಯೂ (Weekend Curfew) ಜಾರಿಯಲ್ಲಿರುವುದಿಲ್ಲ.

11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.


Spread the love

Leave a Reply

Your email address will not be published. Required fields are marked *