ಕಾರು-ಬೈಕ್ ಡಿಕ್ಕಿ: ಓರ್ವ ಸ್ಥಳದಲ್ಲಿ ದುರ್ಮರಣ..

ಧಾರವಾಡ: ವೇಗವಾಗಿ ಹೋಗುತ್ತಿದ್ದ ಬೈಕಿಗೆ ಅಷ್ಟೇ ವೇಗವಾಗಿ ಬರುತ್ತಿದ್ದ ಐಷಾರಾಮಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಮರೇವಾಡದ ಸಮೀಪ ಸಂಭವಿಸಿದೆ.

ಮೃತ ಯುವಕನನ್ನ ಧಾರವಾಡದ ಸಾರಸ್ವತಪುರಪುರದ ಆನಂದ ಪೂಜಾರಿ ಎಂದು ಗುರುತಿಸಲಾಗಿದ್ದು, ವೇಗವಾಗಿ ವಾಹನ ಚಲಾಯಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಐಷಾರಾಮಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.