Posts Slider

Karnataka Voice

Latest Kannada News

ಧಾರವಾಡ ಜಿಲ್ಲೆಯಲ್ಲಿ ದನಗಳ್ಳತನ: ಗ್ಯಾಂಗ್ ಬಂಧಿಸಿದ ಹಳೇಹುಬ್ಬಳ್ಳಿ ಠಾಣೆ ಪೊಲೀಸರು…

Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಮನೆ ಹಾಗೂ ಹೊಲದ ಶೆಡ್ ನಲ್ಲಿ ಕಟ್ಟಿದ್ದ ದನಕರುಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ ಖದೀಮರನ್ನು ಹಿಡಿಯುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಧಾರವಾಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಈ ಗ್ಯಾಂಗ್ ಸಾಕಷ್ಟು ದನಕರುಗಳನ್ನು ಕಳ್ಳತನ ಮಾಡಿ ರಾಣೇಬೆನ್ನೂರು ಹಾಗೂ ಇನ್ನಿತರ ಸಂತೆಗಳಲ್ಲಿ ಮಾರಾಟ ಮಾಡುತ್ತಿದ್ದರು.

ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿಯನ್ನು ಆಧರಿಸಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅನ್ನು ಹರಿಹರದಲ್ಲಿ ಪತ್ತೆ ಮಾಡಿದ್ದಾರೆ.

ಬಂಧಿತ ಆರೋಪಿಗಳು ಶಿಕಾರಿಪುರದ ಶಾಹೀಬಖಾನ್ ಬಡಗಿ, ಹರಿಹರದ ಸದ್ದಾಮ್ ಎಂದು ತಿಳಿದು ಬಂದಿದ್ದು ಹಳೇ ಹುಬ್ಬಳ್ಳಿ ಪೊಲೀಸರು ಆರೋಪಿಗಳಿಂದ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *