ಕಾಂಗ್ರೆಸ್ ಮುಖಂಡರ ಜೊತೆ ಹೆಜ್ಜೆ ಹಾಕುತ್ತಿರುವ ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿ…!

ಧಾರವಾಡ: ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಜಾತ್ಯಾತೀತ ಜನತಾದಳದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಹೆಜ್ಜೆ ಹಾಕುತ್ತಿದ್ದಾರೆ. ಇದಕ್ಕೆ ಕಾರಣವಾಗಿದ್ದು, ವಿಧಾನಪರಿಷತ್ ಚುನಾವಣೆ.

ಹೌದು.. ಜೆಡಿಎಸ್ ನ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮಾತುಗಳನ್ನ ಆಡುತ್ತಿರುವ ಮೊದಲೇ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ ಪರವಾಗಿ ಕೋನರೆಡ್ಡಿ ಪ್ರಚಾರವನ್ನ ಆರಂಭಿಸಿದ್ದಾರೆ.
ನವಲಗುಂದ ಕ್ಷೇತ್ರದಲ್ಲಿರುವ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮುಂದಿನ ನವಲಗುಂದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಯವರೊಂದಿಗೆ ಕ್ಷೇತ್ರದ ಹಲವು ಗ್ರಾಮ ಪಂಚಾಯತಿಗಳಿಗೆ ತೆರಳಿ, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಕೋನರೆಡ್ಡಿಯವರು ಪ್ರಚಾರ ಮಾಡುತ್ತಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದರೇ, ಮತ್ತೆ ಅವರು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೇಳಿಕೆ ಕೊಡುವುದು ನಿಶ್ಚಿತ. ಈಗ ಮಾತ್ರ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿದ್ದಾರೆ.