ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿ ನಾಳೆ ಕಾಂಗ್ರೆಸ್ ಸೇರ್ಪಡೆ ಕ್ಯಾನ್ಸಲ್…!

ನವಲಗುಂದ: ಜಾತ್ಯಾತೀತ ಜನತಾದಳದ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆ ದಿನವನ್ನ ಮುಂದೂಡಲಾಗಿದೆ. ಈ ಬಗ್ಗೆ ಸ್ವತಃ ಕೋನರೆಡ್ಡಿಯವರು ಹೇಳಿದ್ದಾರೆ.
ನವಲಗುಂದ ಪಟ್ಟಣದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು ಉಪಸ್ಥಿತರಿರುತ್ತಾರೆ ಎಂದು ಹೇಳಿದರು.
ಕಳೆದ ಬಾರಿ ಸೋತ ನಂತರ ಎಲ್ಲರ ಪ್ರಶ್ನೆಗೆ ಉತ್ತರ ಸಿಗಲಿಲ್ಲ. ಹೀಗಾಗಿ ಎಲ್ಲರ ಮಾತಿನಂತೆ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಹೇಳಿದರು.