ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಮಠದ ಬಳಿ ಶವ…!

ಹುಬ್ಬಳ್ಳಿ: ನಗರದ ಕುಸುಗಲ್ ರಸ್ತೆಯ ಶ್ರೀ ಸಿದ್ಧಾರೂಢ ಮಠದ ಹತ್ತಿರದ ಹೊಲವೊಂದರಲ್ಲಿ ಅಪರಿಚಿತ ವ್ಯಕ್ತಿಯು ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ಇಂದು ಬೆಳಗಿನ ಜಾವ, ಹೊಲದಲ್ಲಿ ಯಾರೋ ಮಲಗಿದ್ದಾರೆಂದುಕೊಂಡಿದ್ದ ಸಮಯದಲ್ಲಿ, ಹೊಲದ ಮಾಲೀಕನಿಗೆ ವಿಷಯ ಗೊತ್ತಾಗಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಸ್ಥಳಕ್ಕೆ ಆಗಮಿಸಿದ್ದ ಗ್ರಾಮೀಣ ಠಾಣೆಯ ಪೊಲೀಸರು ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸಗೆ ರವಾನೆ ಮಾಡಿದ್ದು, ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.