ಐಪಿಎಸ್ ರವಿ ಚೆನ್ನಣ್ಣನವರ ಬಗ್ಗೆ ತನಿಖೆ ನಡೆಯುತ್ತಿದೆ: ಗೃಹ ಸಚಿವ ಅರಗ ಜ್ಞಾನೇಂದ್ರ…

ಮೈಸೂರು: ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ ಬಗ್ಗೆ ಸರಕಾರದ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಈ ಬಗ್ಗೆ ತನಿಖೆ ನಡೆಯುತ್ತಿದೆ. ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಬಂದ ದೂರಿನ ಆಧಾರದಲ್ಲಿ ತನಿಖೆ ಶುರುವಾಗಿದೆ. ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ. ಅದು ಶಿಕ್ಷೆ ಅಥವಾ ಬೇರೆ ಇನ್ನೇನೋ ಅಲ್ಲ. ಸಧ್ಯ ವರ್ಗಾವಣೆ ತಡೆ ವಿಚಾರ ಆ ರೀತಿ ಯಾವುದು ಇಲ್ಲ ಎಂದು ಮೈಸೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಟೋಯಿಂಗ್‌ನಿಂದ ಸಾರ್ವಜನಿಕರಿಗೆ ಸಮಸ್ಯೆ ವಿಚಾರವಾಗಿ ಮಾತನಾಡಿದ ಸಚಿವರು, ಎಲ್ಲಿಯವರೆಗೂ ಸಾರ್ವಜನಿಕರು ಹೊಣೆಗಾರಿಕೆ ಅರಿಯುವುದಿಲ್ಲ. ಅಲ್ಲಿಯವರೆಗೂ ಪೊಲೀಸರಿಂದ ಕಾನೂನಾತ್ಮಕ ಕ್ರಮ ಅನಿವಾರ್ಯ ಎಂದರು.