Posts Slider

Karnataka Voice

Latest Kannada News

ಧಾರವಾಡ ಜಿ.ಪಂ ನೂತನ ಸಿಇಓ ಆಗಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ..

Spread the love

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ ನೂತನ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುರೇಶ ಇಟ್ನಾಳ ಅವರು ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ಹಿಂದಿನ ಸಿಇಓ ಡಾ.ಸುಶೀಲಾ ಬಿ. ಅವರು ಡಾ. ಇಟ್ನಾಳ ಅವರಿಗೆ ಅಧಿಕಾರ ವಹಿಸಿಕೊಟ್ಟರು.  ಡಾ.ಸುರೇಶ ಇಟ್ನಾಳ ಅವರು ಬೆಳಗಾವಿ ಮತ್ತು  ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತನೂತನ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ ಸೇರಿದಂತೆ ಜಿಲ್ಲಾ ಪಂಚಾಯತ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *