ಹುಬ್ಬಳ್ಳಿ “ಐಟಿ ಪಾರ್ಕಲ್ಲಿ” ಭೀಕರ ಕೊಲೆ…!?

ಹುಬ್ಬಳ್ಳಿ: ಸೆಕ್ಯುರಿಟಿ ಗಾರ್ಡ್ ಓರ್ವರು ಭೀಕರವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಐಟಿ ಪಾರ್ಕ್ ನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ನಿಯಮಿತದಲ್ಲಿ ನಡೆದಿದೆ.

ಮೃತ ದುರ್ದೈವಿ ಚನ್ನಮಲ್ಲಯ್ಯ ಶೇಖಯ್ಯ ಹಿರೇಮಠ (44) ಎಂದು ತಿಳಿದು ಬಂದಿದ್ದು, ಈತ ಮೂಲತಃ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಪತ್ನಿ ಹಾಗೂ ಇಬ್ಬರ ಮಕ್ಕಳೊಂದಿಗೆ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಈತ ಐಟಿ ಪಾರ್ಕ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ, ನಿನ್ನೆ ರಾತ್ರಿ ಎಂದಿನಂತೆ ಕೆಲಸಕ್ಕೆ ಬಂದಿದ್ದು, ಇಂದು ತಾನು ಕೆಲಸ ಮಾಡುತ್ತಿದ್ದ ಕಚೇರಿಯ ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದು, ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಗೆ ಕಾರಣವೆನ್ನು ಎಂಬುದು ತಿಳಿದುಬಂದಿಲ್ಲ. ಇನ್ನಷ್ಟೇ ಪೋಲಿಸ್ ತನಿಖೆಯಿಂದ ತಿಳಿಯಬೇಕಾಗಿದೆ.