Posts Slider

Karnataka Voice

Latest Kannada News

ಕರಡಿಗುಡ್ಡದ ಬಳಿ ಹೊಲಕ್ಕೆ ನುಗ್ಗಿದ ಬಸ್- ವಿದ್ಯಾರ್ಥಿಗಳು ಸೇರಿ 35ಕ್ಕೂ ಹೆಚ್ಚು ಪ್ರಯಾಣಿಕರು ಪಾರು…

1 min read
Spread the love

ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಿಂದ  ಪುಡಕಲಕಟ್ಟಿ ಮಾರ್ಗವಾಗಿ ಧಾರವಾಡಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ಸೊಂದು ಹೊಲಕ್ಕೆ ನುಗ್ಗಿದ ಪರಿಣಾಮ ಹಲವರು ಗಾಯಗೊಂಡ ಘಟನೆ ಕರಡಿಗುಡ್ಡ ಗ್ರಾಮದ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.

ಪುಡಕಲಕಟ್ಟಿ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 35-40 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು . ಬಸ್ ಕರಡಿಗುಡ್ಡ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ . ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *