ಹುಬ್ಬಳ್ಳಿಯಲ್ಲಿಂದು ಕಾಂಗ್ರೆಸ್ಸಿನಿಂದ ಬೃಹತ್ ಪ್ರತಿಭಟನೆ…

ಹುಬ್ಬಳ್ಳಿ: ಅಖಿಲ ಭಾರತೀಯ ಕಾಂಗ್ರೆಸ್ ನ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ವಿಚಾರಣೆಯನ್ನ ಖಂಡಿಸಿ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆಯನ್ನ ನಡೆಸಲಾಗುತ್ತಿದೆ.

ವಾಣಿಜ್ಯನಗರಿಯಲ್ಲಿ ನಡೆಯುವ ಪ್ರತಿಭಟನಾ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾಗವಹಿಸಲಿದ್ದು, ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ ಇಮ್ಮಡಿಸಲಿದೆ.
ಹುಬ್ಬಳ್ಳಿಯ ಯುವ ನಾಯಕ ರಜತ ಉಳ್ಳಾಗಡ್ಡಿಮಠ ಅವರ ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಯಲಿದ್ದು, ಬಿಜೆಪಿಯ ವಿರುದ್ಧ ಘೋಷಣೆಗಳು ಮೊಳಗಲಿವೆ.