Posts Slider

Karnataka Voice

Latest Kannada News

ಹುಬ್ಬಳ್ಳಿಯ “ಪೊಲೀಸ್ ಠಾಣೆಯಲ್ಲೇ” ಕತ್ತು ಕೊಯ್ದುಕೊಂಡ ಯುವಕ…

Spread the love

ಹುಬ್ಬಳ್ಳಿ: ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಿನ್ನೇ ಸಾಯಂಕಾಲ ನಡೆದಿದೆ.

ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿನ ಬಿರಿಯಾನಿ ಹೌಸ್ ಅಂಗಡಿಯ ಮಾಲೀಕರ ಜೊತೆ ರಾಘವೇಂದ್ರ ಎಂಬ ಯುವಕನ ನಡುವೆ ಮಾತಿಗೆ ಮಾತು ಬೆಳೆದು ಅತಿರೇಕಕ್ಕೆ ಹೋದ ಪರಿಣಾಮ ಬಿರಿಯಾನಿ ಹೌಸ್ ಮಾಲೀಕರು ರಾಘವೇಂದ್ರ ನನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಆಗ ಪೊಲೀಸರು ಬಿರಿಯಾನಿ ಹೌಸ್ ಮಾಲಿಕರನ್ನು ಹಾಗೂ ರಾಘವೇಂದ್ರ ಎಂಬ ಯುವಕನನ್ನು ವಿಚಾರಣೆ ಮಾಡುತ್ತಿದ್ದಾಗ ಪೊಲೀಸರ ಮುಂದೆಯೇ ರಾಘವೇಂದ್ರ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಅಲ್ಲೆ ಇದ್ದ ಹಿರಿಯ ಅಧಿಕಾರಿಗಳು ಅಲ್ಲಿಂದ ಕಾಲ್ಕಿತ್ತಿದ್ದು, ಗಾಯಗೊಂಡ ಯುವಕನನ್ನು ಬಿರಿಯಾನಿ ಹೌಸ್ ನವರೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.


Spread the love

Leave a Reply

Your email address will not be published. Required fields are marked *