ಅರವಿಂದ ಬೆಲ್ಲದ ವಿಧಾನಸಭೆ ವಿರೋಧ ಪಕ್ಷದ ನಾಯಕ…!?
1 min readಬೆಂಗಳೂರು: ರಾಜ್ಯದ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರನ್ನಾಗಿ ಧಾರವಾಡ-74 ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರನ್ನ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಕಳೆದ ಸಲ ಮುಖ್ಯಮಂತ್ರಿ ಗಾದಿಯ ಮೇಲೆ ಕಣ್ಣಿಟ್ಟಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕೊನೆಯವರೆಗೂ ಮಂತ್ರಿ ಕೂಡಾ ಆಗಲು ಅವಕಾಶವನ್ನ ಬಿಜೆಪಿ ಅವರಿಗೆ ಕೊಟ್ಟಿರಲಿಲ್ಲ. ಆದರೆ, ಈ ಬಾರಿ ಅವರಿಗೆ ಮಹತ್ವದ ಜವಾಬ್ದಾರಿ ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷ ಈಗಾಗಲೇ ಲಿಂಗಾಯತ ಪ್ಯಾಕ್ಟರ್ ಮೇಲೆ ಸಾಕಷ್ಟು ರಾಜಕೀಯ ಮಾಡುತ್ತಿದ್ದು, ಅದನ್ನ ಹತ್ತಿಕ್ಕಲು ಬಿಜೆಪಿ ಲಿಂಗಾಯತ ಪಂಚಮಸಾಲಿ ಮುಖಂಡನನ್ನ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಮುಂದಾಗಿದೆ ಎಂಬುದನ್ನ ಅಲ್ಲಗಳೆಯುವ ಹಾಗಿಲ್ಲ.