Posts Slider

Karnataka Voice

Latest Kannada News

ಸರಕಾರದ ವಿರುದ್ಧ ರಸ್ತೆಗಿಳಿಯಲಿದ್ದಾರೆ ಮಾಜಿ ಶಾಸಕ ಅಮೃತ ದೇಸಾಯಿ….

1 min read
Spread the love

ಧಾರವಾಡ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ ಎಂದು ಆರೋಪಿಸಿ ನಾಳೆ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬೃಹತ್ ಹೋರಾಟವನ್ನ ಧಾರವಾಡದಲ್ಲಿ ನಡೆಸಲಾಗುತ್ತಿದೆ.

ಭಾರತೀಯ ಜನತಾ ಪಾರ್ಟಿ ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರ 71 ರೈತ ಮೋರ್ಚಾ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತಪರ ಕೈಗೊಂಡ ಹಲವಾರು ಯೋಜನೆಗಳನ್ನು ಕೈಬಿಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ದ ರೈತ ವಿರೋಧಿ ನೀತಿ ಖಂಡಿಸಿ, ಮಾಜಿ ಶಾಸಕ ಅಮೃತ ದೇಸಾಯಿಯವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಮೂಲಕ ಧಾರವಾಡದ ಕಲಾಭವನದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ತೆರಳಿ ಬೃಹತ್ ಪ್ರತಿಭಟನೆ ಮಾಡಲಾಗುವುದು.

ಈ ಪ್ರತಿಭಟನೆಯಲ್ಲಿ ಜಿಲ್ಲೆಯ ರೈತಾಪಿ ಜನರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed