ನಿಗಮ ಮಂಡಳಿಯಲ್ಲಿ “ಶಾಕೀರ ಸನದಿ”ಗೂ ಅವಕಾಶ ಫಿಕ್ಸ್…!

ಬೆಂಗಳೂರು: ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿರುವ ಮೂಲತಃ ಹುಬ್ಬಳ್ಳಿಯ ಶಾಕೀರ ಸನದಿ ಅವರಿಗೂ ನಿಗಮ ಮಂಡಳಿಯಲ್ಲಿ ಅವಕಾಶ ನೀಡಲಾಗಿದ್ದು, ಇನ್ನೇನು ಪಟ್ಟಿ ಬಿಡುಗಡೆ ಆಗಲಿದೆ.
ಮಾಜಿ ಸಂಸದ ಐ.ಜಿ.ಸನದಿ ಅವರ ಪುತ್ರರಾಗಿರುವ ಶಾಕೀರ ಅವರು ರಾಷ್ಟ್ರ ರಾಜಕಾರಣದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪಕ್ಷದ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಪಕ್ಷದಲ್ಲಿ ನಿರಂತರವಾಗಿ ದುಡಿಯುತ್ತಿರುವ ಶಾಕೀರ ಸನದಿ ಅವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಈಗಾಗಲೇ ಅಂಕಿತ ಹಾಕಿದ್ದು, ಪಟ್ಟಿಯಲ್ಲಿ ಹೆಸರು ಇರಲಿದೆ ಎಂದು ತಿಳಿದು ಬಂದಿದೆ.
ನವಲಗುಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಯುವ ನಾಯಕ ವಿನೋದ ಅಸೂಟಿ ಅವರಿಗೂ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.