ನಾಳೆ ವಿನೋದ ಅಸೂಟಿ ನಾಮಪತ್ರ ಸಲ್ಲಿಕೆ: ಧಾರವಾಡಕ್ಕೆ ಲಗ್ಗೆಯಿಡಲಿದ್ದಾರೆ ಸಹಸ್ರಾರು ಕಾರ್ಯಕರ್ತರು…!!!!

ಧಾರವಾಡ: ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಅವರು ನಾಳೆ (16ನೇ ಏಪ್ರಿಲ್) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಧಾರವಾಡದ ಶಿವಾಜಿ ಸರ್ಕಲ್ ನಿಂದ ಬೃಹತ್ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 10:00 ಘಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಈ ವೇಳೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಜಿಲ್ಲೆಯ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್. ಎಚ್. ಕೋನರೆಡ್ಡಿ ಹಾಗೂ ಶಿವಲೀಲಾ ಕುಲಕರ್ಣಿ, ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ತಾಫಹುಸೇನ ಹಳ್ಳೂರ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅನಿಲಕುಮಾರ್ ಪಾಟೀಲ್ ಸೇರಿದಂತೆ ಹಲವಾರು ಮುಖಂಡರು ಹಾಜರಿರಲಿದ್ದಾರೆ.
ಅಲ್ಲದೆ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ ಬ್ಲಾಕ್ ಅಧ್ಯಕ್ಷರು, ಮುಂಚೂಣಿ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.