ಬ್ಯಾಹಟ್ಟಿಯಲ್ಲಿ “ಎಕ್ಕಾ, ರಾಣಿ, ರಾಜಾ, ಜಾಕ್ಯಾ”ಟ- 6ಜನರ ಅರೆಸ್ಟ್…!!!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಪೊಲೀಸರು ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ಮಾಡಿ, ಆರು ಜನರನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ಸಪೆಕ್ಟರ್ ಮುರಗೇಶ ಚೆನ್ನಣ್ಣನವರ ಮಾಹಿತಿಯ ಮೇರೆಗೆ ಪಿಎಸ್ಐ ಬೆಳಗಾಂವಕರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆರೋಪಿಗಳಿಂದ ಸಾವಿರಾರು ರೂಪಾಯಿ ನಗದು ಹಾಗೂ ಒಂದು ಬೈಕ್‌ನ್ನ ವಶಕ್ಕೆ ಪಡೆಯಲಾಗಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮವನ್ನ ಜರುಗಿಸಲಾಗುತ್ತಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕಿದೆ.