ಹುಬ್ಬಳ್ಳಿಯ ರಾಮನಾಳ ಕ್ರಾಸ್ ಬಳಿ ಕಾರಿಗೆ ತಾಗಿ, ಮರಕ್ಕೆ ಡಿಕ್ಕಿ ಹೊಡೆದ NWKSRTC ಬಸ್- ಚಾಲಕ ಸೇರಿ ಐವರ ಸ್ಥಿತಿ ಅಯೋಮಯ…!!!

ರಾಮನಾಳ ಕ್ರಾಸ್ ಬಳಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್; ಚಾಲಕನ ಕಾಲು ಕಟ್
ನಾಲ್ಕು ಜನರ ಸ್ಥಿತಿ ಗಂಭೀರ
ಹುಬ್ಬಳ್ಳಿ: ರಾಮನಾಳ ಕ್ರಾಸ್ ಬಳಿಯಲ್ಲಿ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಾರಿಗೆ ತಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಬಸ್‌ನಲ್ಲಿದ್ದ ಐದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಕುಮಟಾಗೆ ಹೋಗುತ್ತಿದ್ದ ಸರ್ಕಾರಿ ಬಸ್‌ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದಾಗ ರಾಮನಾಳ ಕ್ರಾಸ್ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಚಾಲಕನ ಎರಡು ಕಾಲುಗಳು ಕಟ್ ಆಗಿದ್ದು. ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಗಂಭೀರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹಾಗೂ ಸಣ್ಣಪುಟ್ಟ ಗಾಯಗಳಾದವರನ್ನು ಕಲಘಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.