Posts Slider

Karnataka Voice

Latest Kannada News

“ಹಿಂದು ಫೈರ್ ಬ್ರ್ಯಾಂಡ್” ಯತ್ನಾಳ ವಿರುದ್ಧ ಜಾಮೀನು ರಹಿತ ವಾರೆಂಟ್…!!!

1 min read
Spread the love

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಲಾಗಿದೆ.

ದಿನೇಶ್ ಗುಂಡೂರಾವ್ ಪತ್ನಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಖಾಸಗಿ ದೂರನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಕೆ‌.ಎನ್.ಶಿವಕುಮಾರ್ ಅವರು ಈ ಆದೇಶ ಮಾಡಿದ್ದಾರೆ. ಈ ಮೊದಲೇ ಶಾಸಕ ಯತ್ನಾಳ್ ಅವರಿಗೆ ಅಕ್ಟೋಬರ್‌ 16ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಶಾಸಕರು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆಯನ್ನು ಇದೇ ತಿಂಗಳ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಏನಿದು ಪ್ರಕರಣ..?: ಶಾಸಕ ಯತ್ನಾಳ್ ಅವರು ಸುದ್ದಿಗಾರರ ಜೊತೆಗೆ ಮಾತನಾಡುವಾಗ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ದಿನೇಶ್ ಗುಂಡೂರಾವ್ ಅವರ ಪತ್ನಿ ತಬುಸ್ಸುಮ್ ರಾವ್ ಅವರನ್ನು ಟೀಕಿಸಿದ್ದರು. ಸಚಿವರ ಮನೆಯಲ್ಲಿಯೇ ಅರ್ಧ ಪಾಕಿಸ್ತಾನ ಇದೆ ಎಂದು ಗುಡಗಿದ್ದರು. ಈ ಕುರಿತು ತಬುಸ್ಸುಮ್ ಅವರು ಯತ್ನಾಳ್‌ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜತೆಗೆ, ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.

ಈ ಹಿಂದೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ರದ್ದು ಮಾಡುವಂತೆ ಕೋರಿ ಶಾಸಕ ಯತ್ನಾಳ್‌ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಹೇಳಿಕೆಯನ್ನು ಕೀಳು ಅಭಿರುಚಿ ಎಂದಿದ್ದರು. ಆ ಬಳಿಕ ಹೇಳಿಕೆ ನೀಡಿದ್ದಾರೋ ಇಲ್ವೋ ಎಂದು ಪ್ರಶ್ನೆ ಮಾಡಿದರು. ಯತ್ನಾಳ್‌ ಪರ ವಕೀಲರು ಹೌದು ಹೇಳಿಕೆ ನೀಡಿದ್ದಾರೆ ಎಂದು ಒಪ್ಪಿಕೊಂಡಿದ್ದರು. ಈ ರೀತಿಯ ಪದ ಬಳಕೆ ಸಮಾಜಕ್ಕೆ ಯಾವ ರೀತಿಯ ಸಂದೇಶ ನೀಡುತ್ತದೆ. ವಯಕ್ತಿಕ ತೇಜೋವಧೆಗೆ ಏಕೆ ಇಳಿಯುತ್ತೀರಾ ಎಂದು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು. ಇದೇ ವಿಚಾರ ಇದೀಗ ಶಾಸಕ ಯತ್ನಾಳ್ ಅವರಿಗೆ ಮುಳುವಾಗಿ, ಜಾಮೀನು ರಹಿತ ವಾರೆಂಟ್ ಹೊರಬಿದ್ದಿದೆ.


Spread the love

Leave a Reply

Your email address will not be published. Required fields are marked *

You may have missed