ಧಾರವಾಡ: ಲಂಚ ಪಡೆಯದವರನ್ನ ಹುಡುಕುವ ಸ್ಥಿತಿ- “ನ್ಯಾಯಾಧೀಶೆ ಬಿಜಿ ರಮಾ” ಕಳವಳ…!!!
1 min readಭ್ರಷ್ಟಾಚಾರ ಒಂದು ಪಿಡುಗು: ಅದನ್ನು ತೊಡೆದು ಹಾಕಲು ನಿಸ್ವಾರ್ಥ ಸೇವೆ, ನಿಸ್ವಾರ್ಥ ಜೀವನ ತಮ್ಮದಾಗಬೇಕು: ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಬಿ.ಜಿ.ರಮಾ
ಧಾರವಾಡ: ಇಂದು ಎಲ್ಲೆಡೆ ಭ್ರಷ್ಟಾಚಾರದ ಮಾತು ಕೇಳಿ ಬರುತ್ತಿದೆ. ಇದು ಸಮಾಜಕ್ಕೆ ಅಂಟಿದ ಪಿಡುಗು. ಇದನ್ನು ತೊಡೆದು ಹಾಕಲು ನಿಸ್ವಾರ್ಥ ಸೇವೆ, ನಿಸ್ವಾರ್ಥ ಜೀವನ ನಮ್ಮದಾಗಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಬಿ.ಜಿ.ರಮಾ ಅವರು ಹೇಳಿದರು.
ಪೂರ್ಣ ವೀಡಿಯೋ ನೋಡಿ… ತಿಳಿದುಕೊಳ್ಳಿ…
ಅವರು ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಧಾರವಾಡ ಇವರು ಸಂಯುಕ್ತವಾಗಿ ಆಯೋಜಿಸಿದ್ದ ಜಾಗೃತಿ ಅರಿವು ಸಪ್ತಾಹ-2024 ನ್ನು ಉದ್ಘಾಟಿಸಿ, ಮಾತನಾಡಿದರು.
ಭ್ರಷ್ಟಾಚಾರವು ನಿರಂತರ ಸೇವೆ ಪ್ರಾಮಾಣಿಕತೆಯನ್ನು ತಿಂದು ಹಾಕುತ್ತದೆ. ಸಮಾಜ ಕಲುಷಿತಗೊಂಡರೆ, ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಪ್ರತಿಯೊಬ್ಬರು ಪಾರದರ್ಶಕವಾಗಿ ಮತ್ತು ಆತ್ಮಸಾಕ್ಷಿಯಿಂದ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು.
ನಿಯತ್ತಿನ ದುಡಿಮೆ ಆತ್ಮಬಲ ಹೆಚ್ಚಿಸುತ್ತದೆ. ಕಾಯಕ ಶುದ್ಧವಾಗಿದ್ದರೆ ಕಾಯಲು ಬೇರೆಯವರ ಅಗತ್ಯವಿಲ್ಲ. ಇತರರ ದುಡಿಮೆಯನ್ನು ಗುರುತಿಸಿ, ಗೌರವಿಸೋಣ. ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಎಲ್ಲರೂ ಸೇರಿ ಬದುಕೋಣ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಬಿ.ಜಿ.ರಮಾ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿ.ಕಾ.ಸೇ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಪ್.ದೊಡ್ಡಮನಿ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ವೇದಿಕೆಯಲ್ಲಿ ಇದ್ದರು.
ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಹುನಮಂತರಾಯ ಅವರು ಸ್ವಾಗತಿಸಿ, ಮಾತನಾಡಿದರು.
ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಬಿ.ಜಿ.ರಮಾ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಭ್ರಷ್ಟಾಚಾರ ನಿಯಂತ್ರಣದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮವನ್ನು ಅಲಿ ಮಹಮ್ಮದ ತಹಶೀಲ್ದಾದ ಅವರು ನಿರೂಪಿಸಿದರು. ಹಿರಿಯ ನ್ಯಾಯವಾದಿ ಸೋಮಶೇಖರ ಜಾಡರ ವಂದಿಸಿದರು. ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.