ಧಾರವಾಡ ಬಂದ್: ಅಂಗಡಿ ಮುಗ್ಗಟ್ಟು ‘ಕ್ಲೋಸ್’- ಬಸ್ ಸಂಚಾರವಿಲ್ಲ, ಬಿಕೋ ಎನ್ನುತ್ತಿರುವ ರಸ್ತೆಗಳು…!!!
ಧಾರವಾಡ: ಕೇಂದ್ರ ಸಚಿವ ಅಮಿತ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತ ಸಂಘಟನೆಗಳು ಅವಳಿನಗರ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಳಗಿನಿಂದಲೇ ಪ್ರತಿಭಟನೆ ಆರಂಭಗೊಂಡಿದ್ದು, ಬಹುತೇಕ ಎಲ್ಲವೂ ಬಂದ್ ಆಗಿದೆ.
ಧಾರವಾಡದ ಜುಬ್ಲಿ ವೃತ್ತದಲ್ಲಿ ಪ್ರತಿಭಟನಾಕಾರರು ಹೋರಾಟ ಆರಂಭಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ನಗರದ ಬಹುತೇಕ ಅಂಗಡಿ-ಮುಗ್ಗಟ್ಟುಗಳು ಬಂದ್ ಆಗಿವೆ. ಶಹರದ ಶಾಲೆಗಳಿಗೆ ರಜೆ ಕೊಟ್ಟಿದ್ದು, ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದೆ.