ಧಾರವಾಡದಲ್ಲಿ ನಾಲ್ಕು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಸಚಿನ…!!!
ಧಾರವಾಡ: ತನ್ನ ಮನೆಯ ಪಕ್ಕದ ಹೊಸ ಮನೆಯಲ್ಲಿ 36 ವಯಸ್ಸಿನ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ರವಿವಾರ ಪೇಟೆಯ ಬಳಿ ಸಂಭವಿಸಿದೆ.
ಸಚಿನ ದತ್ತಾತ್ರೇಯ ಎಂಬ ಯುವಕನೇ ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹವೂ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆವ್ಯಕ್ತವಾಗಿದೆ.
ಶಹರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.