Posts Slider

Karnataka Voice

Latest Kannada News

ಧಾರವಾಡದಲ್ಲಿ 15ಕ್ಕೆ ಹೋಳಿ, ಹುಬ್ಬಳ್ಳಿಯಲ್ಲಿ 18ಕ್ಕೆ “ರಂಗ” ಪಂಚಮಿ “ಬರಸೇ”….

Spread the love

ಹುಬ್ಬಳ್ಳಿ: ರಂಗಪಂಚಮಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹುಬ್ಬಳ್ಳಿಯಲ್ಲಿ ಕಾಮದೇವರನ್ನು ಪ್ರತಿಸ್ಥಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಶಾಂತಿಯುತ ಹಬ್ಬ ಆಚರಣೆಗೆ ಕರೆ ಕೊಟ್ಟರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಬಾರಿ ಹೋಳಿಹಬ್ಬವನ್ನು ಧಾರವಾಡದಲ್ಲಿ ಮಾರ್ಚ್ 15, ಹುಬ್ಬಳ್ಳಿಯಲ್ಲಿ 18 ನೇ ತಾರೀಖು ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಹೊರ ಜಿಲ್ಲೆಗಳಿಂದ 2500 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಕರೆಸಲಾಗುತ್ತಿದೆ ಎಂದರು.

ವೀಡಿಯೋ… 

ಹುಬ್ಬಳ್ಳಿ-ಧಾರವಾಡದಲ್ಲಿ ರಾಜ್ಯವೇ ಮೆಚ್ಚುವ ಹಾಗೇ ಸಾಂಪ್ರದಾಯಿಕವಾಗಿ ಹೋಳಿ ಆಚರಣೆ ಮಾಡಲಾಗುತ್ತದೆ. ಹೀಗಾಗಿ ಬೇರೆ ಜಿಲ್ಲೆ, ಹೊರ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. 400 ಕ್ಕೂ ಹೆಚ್ಚು ಪ್ರತ್ಯೇಕ ಸ್ಥಳದಲ್ಲಿ ಕಾಮದೇವರ ಸ್ಥಾಪನೆ ಆಗಲಿದೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಬಂಧಿಸಿದಂತೆ ಸಿದ್ದತೆ ಮಾಡಲಾಗಿದೆ ಎಂದು ತಿಳಿಸಿದರು.


Spread the love

Leave a Reply

Your email address will not be published. Required fields are marked *

You may have missed