ಭದ್ರಾಪೂರದ ಬಳಿ ಭೀಕರ ಅಪಘಾತ ಸ್ಥಳದಲ್ಲಿ ಮೂವರ ದುರ್ಮರಣ…

ಹುಬ್ಬಳ್ಳಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕ್ವಾಲಿಸ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ನಡೆದಿದ್ದು, ಸ್ಥಳದಲ್ಲಿ ಮೂವರು ಸಾವಿಗೀಡಾಗಿದ್ದಾರೆ.
ಕ್ವಾಲಿಸ್ ವಾಹನ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ಮುಂಭಾಗದಲ್ಲಿ ಕುಳಿತಿದ್ದ ಮೂವರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಮೃತರ ಮಾಹಿತಿ ತಿಳಿದು ಬಂದಿಲ್ಲ.
ಅಣ್ಣಿಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.