ಇಟಗಿ ಕ್ರಾಸ್ ಬಳಿ ಹೈವೇನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಪಲ್ಟಿ- 4 ಸಾವು, ಛಿದ್ರವಾದ ದೇಹಗಳು… Breaking

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಆಯಿಲ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ನಾಲ್ವರು ಸಾವಿಗೀಡಾಗಿರುವ ಘಟನೆ ಇಟಗಿ ಕ್ರಾಸ್ ಬಳಿ ಸಂಭವಿಸಿದೆ.
ಟ್ಯಾಂಕರ್‌ನ ಜಾಯಿಂಟ್ ಕಟ್ ಆಗಿ ನಿಯಂತ್ರಣ ತಪ್ಪಿದೆ. ಆಗ ಹೈವೇ ಮಧ್ಯದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆರಗಿದ ಟ್ಯಾಂಕರ್ ಪಲ್ಟಿಯಾಗಿದೆ.
ಸಾವಿಂದ ತಪ್ಪಿಸಿಕೊಳ್ಳಲು ಕಾರ್ಮಿಕರು ಹೆಣಗಾಡಿದ್ದು, ರಸ್ತೆಯುದ್ದಕ್ಕೂ ದೇಹಗಳು ಛಿದ್ರ ಛಿದ್ರವಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು ತಪಾಸಣೆ ನಡೆಸಿದ್ದಾರೆ. ಟ್ಯಾಂಕರ್‌ನಲ್ಲಿನ ಆಯಿಲ್ ಸಂಪೂರ್ಣವಾಗಿ ಸೋರತೊಡಗಿದೆ.