BVB ಕ್ಯಾಂಪಸ್‌ಗೆ ಧಾರವಾಡ DC ಆದೇಶಗಳು ಅನ್ವಯವಾಗುವುದಿಲ್ಲವೇ…!?
 
        ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಆದೇಶಗಳು ಬಿವಿಬಿ ಶಿಕ್ಷಣ ಸಂಸ್ಥೆಗೆ ಅನ್ವಯವಾಗುವುದಿಲ್ಲವೇ ಎಂಬ ಪ್ರಶ್ನೆಯನ್ನ ಪ್ರಜ್ಞಾವಂತರು ಕೇಳುತ್ತಿದ್ದಾರೆ.
ಹೌದು… ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಅವಳಿನಗರವೂ ಸೇರಿದಂತೆ ಧಾರವಾಡ ಜಿಲ್ಲೆಯ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ.
ಈ ಕಾರಣದಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಸಾರ್ವಜನಿಕ ಹಿತಾಸಕ್ತಿಗಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆದರೆ, ಬಿವಿಬಿ ಕ್ಯಾಂಪಸ್ ಮಾತ್ರ ರಜೆ ನೀಡಿಲ್ಲ.
ಇಳಿಸಂಜೆ ಹೆಚ್ಚು ಮಳೆ ಸುರಿಯುತ್ತಿರುವ ಪರಿಣಾಮ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು, ಸಿಬ್ಬಂದಿಗಳು ಮನೆ ತಲುಪಲು ಪರದಾಡುವ ಸ್ಥಿತಿಯಿದೆ. ಅಂತಹದರಲ್ಲಿ ಜಿಲ್ಲಾಧಿಕಾರಿ ಆದೇಶ ಪಾಲನೆ ಮಾಡದೇ ಇರುವುದು ಸೋಜಿಗ ಮೂಡಿಸಿದೆ.
 
                       
                       
                       
                       
                      
 
                         
                 
                 
                