ದ್ವಾರಕಾ ಲಾಡ್ಜ್‌ನಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು PSI ಆತ್ಮಹತ್ಯೆ…

ಪ್ಯಾನಿಗೆ ಕೊರಳೊಡ್ಡಿದ ಸಬ್ ಇನ್ಸಪೆಕ್ಟರ್
ಡೆತ್ ನೋಟ್ ಜೊತೆಗೆ ಬಾಂಡ್ ಪೇಪರ್
ತುಮಕೂರು: ನಗರದ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾಗರಾಜಪ್ಪ ಬಿ.ಆರ್ ನೇಣಿಗೆ ಶರಣಾಗಿದ್ದಾರೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ನಾಗರಾಜಪ್ಪ ಬಿ.ಆರ್ ಪಿಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಜುಲೈ 1ರಂದು ಸಬ್ ಇನ್ಸ್ಪೆಕ್ಟರ್ ನಾಗರಾಜಪ್ಪ ತುಮಕೂರು ನಗರದಲ್ಲಿರುವ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಂ ಬಾಡಿಗೆ ಪಡೆದುಕೊಂಡಿದ್ದು, ಅಲ್ಲೇ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದೆ. ಬಳಿಕ ಲಾಡ್ಜ್ ಸಿಬ್ಬಂದಿ ಹೋಗಿ ನೋಡಿದಾಗ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಸಬ್ ಇನ್ಸ್ಪೆಕ್ಟರ್ ನಾಗರಾಜಪ್ಪ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ. ಇನ್ನು ಕುಟುಂಬದ ಹಲವು ಸಮಸ್ಯೆಗಳ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಬಾಂಡ್ ಪೇಪರ್ನಲ್ಲಿ ವಿಲ್ ಬರೆದಿಟ್ಟಿದ್ದಾರೆ. ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೊಬೈಲ್ ಸೇರಿ ಡೆತ್ ನೋಟ್, ಬಾಂಡ್ ಪೇಪರ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ