ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪಿಎಸ್ಐ…!!!

ಇತ್ತೀಚೆಗೆ ಪ್ರಮೋಷನ್ ಪಡೆದಿದ್ದ ಪಿಎಸ್ಐ
ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಮುಂಡಗೋಡ,ಶಿರಸಿಯಲ್ಲಿ ಸೇವೆ ಸಲ್ಲಿಸಿ ಹಾಲಿ ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಕೀರಪ್ಪ ಘಟಕಾಂಭ್ಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ,
ಮೃತ ಪಿಎಸ್‌ಐ ಕೀರಪ್ಪ ಘಟಕಾಂಭ್ಳೆ ಅವರು ಮೂಲತಃ ಮುಂಡಗೋಡ ನಿವಾಸಿಯಾಗಿದ್ದರು. ಅವರು ಮುಂಡಗೋಡ, ಶಿರಸಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದು, ಕಳೆದ ಕೆಲ ತಿಂಗಳ ಹಿಂದಷ್ಟೆ ಪ್ರಮೋಷನ್ ಪಡೆದು ಪಿಎಸ್‌ಐ ಆಗಿ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು. ಇಂದು ಸಂಜೆ ವೇಳೆಯಲ್ಲಿ ಕರ್ತವ್ಯದಲ್ಲಿರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಇದುವರೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.