ಧಾರವಾಡ: ಶಿಕ್ಷಣ ಇಲಾಖೆಯಲ್ಲಿ “ಜಂಡಾ” ಊರಿದವರ ಬಗ್ಗೆ ಸಿಎಂ ಗಮನಕ್ಕೆ- ಸಚಿವ ಸಂತೋಷ ಲಾಡ….

ಧಾರವಾಡ: ಶಿಕ್ಷಣ ಇಲಾಖೆಯ ಅಪರ ಆಯುಕ್ತಾಲಯಲ್ಲಿ 10-15 ವರ್ಷಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಕಡ್ಡಾಯವಾಗಿ ಬೇರೆ ಜಿಲ್ಲೆಗೆ ವರ್ಗಾಯಿಸಲು ಮುಖ್ಯಮಂತ್ರಿ ಜೊತೆ ಮಾತನಾಡಿ ಅವರ ಮನವೊಲಿಸುವುದಾಗಿ ಕಾರ್ಮಿಕ ಸಚಿವ ಸಂತೋಷ ಲಾಡ್ ಭರವಸೆ ನೀಡಿದ್ದಾರೆ.
ವೀಡಿಯೋ….
ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, “ಶಿಕ್ಷಣ ಇಲಾಖೆಯಲ್ಲಿ ಏಳು ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸುತ್ತಿರುವ ನೌಕರರನ್ನು ಬೇರೆ ಜಿಲ್ಲೆಗೆ ವರ್ಗಾಯಿಸಲು ಸಭಾಪತಿ ಬಸವರಾಜ ಹೊರಟ್ಟಿಯವರು ಬರೆದ ಪತ್ರ ನನ್ನ ಗಮನಕ್ಕೆ ಬಂದಿದ್ದು, ಆ ವಿಷಯವು ಸಾರ್ವಜನಿಕ ಹಿತದೃಷ್ಟಿಯಿಂದ ಮಹತ್ವದ್ದಾಗಿದ್ದು, ಮುಖ್ಯಮಂತ್ರಿ ಜೊತೆ ಮಾತನಾಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸುವೆ” ಎಂದು ಸಚಿವರು ಹೇಳಿದರು.