Posts Slider

Karnataka Voice

Latest Kannada News

ಉದ್ಯೋಗಾಂಕ್ಷಿಗಳ ಹೋರಾಟಕ್ಕೆ “ಸ್ತಬ್ಧ”ವಾದ ಧಾರವಾಡ- ಜುಬ್ಲಿ ಸರ್ಕಲ್‌ನಲ್ಲಿ ಕಿಕ್ಕೀರಿದ ನಿರುದ್ಯೋಗಿಗಳು… Exclusive video

Spread the love

ಧಾರವಾಡ: ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ(ರಿ) ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷ ಕಾಂತಕುಮಾರ ನೇತೃತ್ವದಲ್ಲಿ ಸಾವಿರಾರು ಉದ್ಯೋಗ ಆಕಾಂಕ್ಷಿಗಳು ಧಾರವಾಡದ ಜುಬ್ಲಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಹೋರಾಟದಿಂದ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವೀಡಿಯೋ

ಹೋರಾಟದ ಬೇಡಿಕೆಗಳು

ನೇಮಕಾತಿ ಪ್ರಾರಂಭಿಸುವುದು

ವಿವಿಧ ಇಲಾಖೆಗಳಲ್ಲಿನ ವಯೋಮಿತಿ ಹೆಚ್ಚಿಸುವುವುದು

KAS ಅಧಿಸೂಚನೆಯಲ್ಲಿ ಕಂಡು ಬಂದಿರುವ ಕನ್ನಡ ಅನುವಾದದ ತಪ್ಪುಗಳನ್ನು ಪರಿಶೀಲಿಸಿ ಅಧಿಸೂಚನೆಯನ್ನು ರದ್ದುಪಡಿಸುವುದು

ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳು ದೀರ್ಘಕಾಲದಿಂದ ತೀವ್ರ ತೊಂದರೆಗಳನ್ನು ಅನುಭವಿಸುತ್ತಿವೆ. ಕಳೆದ ಹಲವು ವರ್ಷಗಳಿಂದ ಅನೇಕ ಇಲಾಖೆಗಳ ನೇಮಕಾತಿ ನಡೆಯದ ಕಾರಣ ವಿದ್ಯಾರ್ಥಿಗಳು ವಯೋಮಿತಿಯನ್ನು ಮೀರಿದ್ದಾರೆ.

ಉದಾಹರಣೆ

ಹಲವು ವರ್ಷಗಳಿಂದ ಶಿಕ್ಷಕರ ನೇಮಕಾತಿ ನಡೆದಿಲ್ಲ.

4–5 ವರ್ಷಗಳಿಂದ PC, PSI ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿದೆ.

7–8 ವರ್ಷಗಳಿಂದ FDA, SDA ಹುದ್ದೆಗಳ ನೇಮಕಾತಿ ನಡೆದಿಲ್ಲ.

ಈ ಹಿನ್ನೆಲೆಯಲ್ಲಿ ಕನಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಅಲ್ಲದೆ, KAS ಅಧಿಸೂಚನೆಯಲ್ಲಿ ಕಂಡುಬಂದಿರುವ ಕನ್ನಡ ಅನುವಾದದ ತಪ್ಪುಗಳನ್ನು ಪರಿಶೀಲಿಸಿ, ಅಧಿಸೂಚನೆಯನ್ನು ರದ್ದುಪಡಿಸುವ ಅಗತ್ಯವಿದೆ.

ಈ ಬೇಡಿಕೆಗಳನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಮನಿಸಿ, ವಿದ್ಯಾರ್ಥಿಗಳ ಭವಿಷ್ಯವನ್ನು ಉಳಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed