ಪಶ್ಚಿಮ ಪದವೀಧರ ಕ್ಷೇತ್ರಕ್ಕೆ “ಕಾಂಗ್ರೆಸ್ ಅಭ್ಯರ್ಥಿ” ಮಾಡಲು ಡಾ.ಸಲೀಂ ಸೊನ್ನೆಖಾನ ಅರ್ಜಿ…

ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ ಡಾ, ಸಲೀಂ ಸೊನ್ನೆಖಾನ: ಕಾಂಗ್ರೆಸ್ ಟಿಕೇಟಗಾಗಿ ಅರ್ಜಿ ಸಲ್ಲಿಕೆ
ಧಾರವಾಡ: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ ಡಾ, ಸಲೀಂ ಸೊನ್ನೆಖಾನ ಪಶ್ಚಿಮ ಪದವೀಧರ ಮತಕ್ಷೇತ್ರದಿಂದ ನಡೆಯುವ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದರು.
ಸಲೀಂ ಸೊನ್ನೆಖಾನ ಅವರು ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದು, ಪಕ್ಷವನ್ನು ಕೆಳಮಟ್ಟದಿಂದ ಸಂಘಟನೆ ಮಾಡಿದ್ದಾರೆ. ಅಲ್ಲದೇ ನಿರುದ್ಯೋಗಿ ಪದವೀಧರರಿಗೆ ಅನುಕೂಲ ಕಲ್ಪಿಸಿರುವ ಕುರಿತು ಅರ್ಜಿಯಲ್ಲಿ ನಮೂದಿಸಲಾಗಿದೆ.
ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ ಸ್ಪರ್ಧಿಸಲು ಕಳೆದ ಒಂದು ವರ್ಷದಿಂದ ತಯಾರಿ ನಡೆಸಿದ್ದಾರೆ. ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮದೇ ಆದ ಗೆಳೆಯರ ಬಳಗ ಹಾಗೂ ಅಭಿಮಾನಿಗಳನ್ನು ಹೊಂದಿರುವ ಡಾ, ಸಲೀಂ ಸೊನ್ನೆಖಾನ ಕಾಂಗ್ರೆಸ್ ಟಿಕೆಟ್ ಕೊಟ್ಟಲ್ಲಿ ಗೆಲವು ತಂದು ಕೊಡುವ ಸಾಮರ್ಥ್ಯ ಹೊಂದಿರುವದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ತಮ್ಮ ಬೆಂಬಲಿಗರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಅಲ್ತಾಪ್ ಹಳ್ಳೂರಗೆ ಅರ್ಜಿ ಸಲ್ಲಿಸಿದ ಡಾ, ಸಲೀಂ ಸೊನ್ನೆಖಾನ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ಅಲೀಂ ಪಠಾಣ, ಮೆಹಬೂಬ ರಾಮದುರ್ಗ, ಇಸಾಖ ತಮಟಗಾರ, ಎಸ್ ಎಸ್ ಸೌದಾಗರ, ದಸ್ತಗಿರ ತರಡೆ, ಬಸವರಾಹ ಗೂಳ್ಳೋಳ್ಳಿ, ಚೇತನ ಆಚಾರ್ಯ, ದಾವಲಸಾಬ ನಾಡಮ್ಮನವರ, ಮಾಜ ಮುಜಾವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.