Posts Slider

Karnataka Voice

Latest Kannada News

ಮನೆ ಮನೆ ಸಮೀಕ್ಷೆ: ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ

Spread the love

*PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ: ಸಿಎಂ*

*ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ: ಅ19 ರೊಳಗೆ ಸಮೀಕ್ಷೆ ಮುಗಿಯುತ್ತದೆ*

*ವಿಶೇಷ ಬೋಧನಾ ತರಗತಿಗಳ ಮೂಲಕ ಪಠ್ಯ ಪೂರ್ಣಗೊಳಿಸಲಿದ್ದಾರೆ ಶಿಕ್ಷಕರು*

ಸಮೀಕ್ಷೆಯ ಸ್ಥಿತಿ ಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ವಿಡಿಯೊ ಕಾನ್ಷರೆನ್ಸ್

ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.

ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ.

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.

ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು‌.

ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲುಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ.

GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ.


Spread the love

Leave a Reply

Your email address will not be published. Required fields are marked *