ನವಲಗುಂದ ಅಂಜುಮನ ಸಂಸ್ಥೆಯ ಅಧ್ಯಕ್ಷ ಸೇರಿ ಎಲ್ಲ ಸದಸ್ಯರಿಗೂ “ಜಾಮೀನು ರಹಿತ ವಾರೆಂಟ್” ಹೊರಡಿಸಿದ ನ್ಯಾಯಾಲಯ…!!!
ನವಲಗುಂದ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಮಹೇಶ.ಎಂ.ಗೌಡನಾಯಕ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ದಾಖಲಾದ ಪ್ರಕರಣದ ವಿಚಾರಣೆ ನವಲಗುಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಅಂಜುಮನ ಎ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಮತ್ತು ಎಲ್ಲ ಪದಾಧಿಕಾರಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
ನವೆಂಬರ್ 13ರಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದ್ದು, ನವೆಂಬರ್ 24 ರಂದು ದಿನಾಂಕ ನಿಗದಿಯಾಗಿದೆ.

ಅಂಜುಮನ್ ಎ ಇಸ್ಲಾಂ ಸಂಸ್ಥೆಯು ಐತಿಹಾಸಿಕ ಹಿನ್ನೆಲೆ ಹೊಂದಿರುವ ನವಲಗುಂದ ಅಜಾತ ಶ್ರೀ ನಾಗಲಿಂಗ ಗುಡ್ಡದ ಮೊರ್ರಂನ್ನ ಅನಧಿಕೃತವಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಇಲಾಖೆ ಪ್ರಕರಣ ದಾಖಲು ಮಾಡಿದ್ದನ್ನ ಇಲ್ಲಿ ಸ್ಮರಿಸಬಹುದು.
