Big Exclusive- ಅಣ್ಣಿಗೇರಿ ಬಳಿ ಕಾರಲ್ಲೇ ಸುಟ್ಟು ಕರಕಲಾದ ಪೊಲೀಸ್ ಇನ್ಸಪೆಕ್ಟರ್…
ಧಾರವಾಡ: ಲೋಕಾಯುಕ್ತದಲ್ಲಿ ಪೊಲೀಸ್ ಇನ್ಸಪೆಕ್ಟರ್ ಆಗಿದ್ದವರೊಬ್ಬರು ಅಣ್ಣಿಗೇರಿ ಬಳಿ ನಡೆದ ಕಾರಿನ ಅವಘಡದಲ್ಲಿ ಸುಟ್ಟು ಕರಕಲಾಗಿರುವ ಘಟನೆ ಕೆಲವೇ ನಿಮಿಷಗಳ ಹಿಂದೆ ಸಂಭವಿಸಿದೆ.
ಹಾವೇರಿಯ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಎಂಬುವವರೇ ಘಟನೆಯಲ್ಲಿ ಸುಟ್ಟು ಕರಕಲಾಗಿದ್ದು, ಕಾರು ಕೂಡಾ ಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಗದಗಿಗೆ ಹೋಗುವ ಸಮಯದಲ್ಲಿ ದುರ್ಘಟನೆ ನಡೆದಿದೆ. 2003ರ ಬ್ಯಾಚಿನ ಇವರು ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಕೆಲಕಾಲ ಕರ್ತವ್ಯ ನಿರ್ವಹಿಸಿದ್ದರು.
ಘಟನೆಗೆ ನಿಜವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
