ಬಾಲಕಿಯರ ಹಾಸ್ಟೆಲ್‌ನಲ್ಲಿ ‘ಮದ್ಯ’ದ ಮೋಜು: ಕಿಲಾಡಿ ಮಹಿಳಾ ಸಿಬ್ಬಂದಿಯ “ಒಳಗೆ ಸೇರಿದರೇ ಗುಂಡು…”
ಬಾಲಕಿಯರ ಹಾಸ್ಟೆಲ್‌ನಲ್ಲಿ ಸಿಬ್ಬಂದಿ ಕುಡಿತದ ರಂಪಾಟ: ಅಡುಗೆ ಸಿಬ್ಬಂದಿ ಅಮಾನತು
ಬಾಗೇಪಲ್ಲಿ: ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಿದ್ಯಾರ್ಥಿ ನಿಲಯದ ಅಡುಗೆ ಸಿಬ್ಬಂದಿ ಸರೋಜಮ್ಮ ಹಾಗೂ ಹೊರಗುತ್ತಿಗೆ ನೌಕರರಾದ ವೆಂಕಟರಮಣಮ್ಮ ಅವರು ಮದ್ಯ ಸೇವಿಸಿ ವಿದ್ಯಾರ್ಥಿನಿಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದರು. ಇದು ಬಾಲಕಿಯರ ವ್ಯಾಸಂಗಕ್ಕೆ ತೊಂದರೆ ಉಂಟುಮಾಡಿತ್ತು.
ವಿಷಯ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದರೆಡ್ಡಿ ಅವರು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ತವ್ಯ ಲೋಪ ಹಾಗೂ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಅಡುಗೆ ಸಿಬ್ಬಂದಿ ಸರೋಜಮ್ಮ ಅವರನ್ನು ಅಮಾನತುಗೊಳಿಸಿ, ವೆಂಕಟರಮಣಮ್ಮ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಿದ್ದಾರೆ.
…… ಮತ್ತೊಂದು ಸುದ್ದಿ .……
ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಡಿ ಗ್ರಾಮದಲ್ಲಿ ಮರಳು ತುಂಬಿದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರಿಗೆ ತೀವ್ರ ಥರದ ಗಾಯಗಳಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.
