ನೀವೂ RSS, ಪ್ರಲ್ಹಾದ ಜೋಶಿ ಏಜೆಂಟ್ರಾ…!? ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ಕೆಂಡಾಮಂಡಲ…
ಧಾರವಾಡದಲ್ಲಿ ಮತ್ತೆ ಗಲಾಟೆ: ಪ್ರಜೆಂಟೆಶನ್ ಶಾಲೆಯಲ್ಲಿ ಅಧಿಕಾರಿಗಳ ವಿರುದ್ಧ ಕೈ ಮುಖಂಡ ಚಿಂಚೂರೆ ಆಕ್ರೋಶ
ವೋಟರ್ ಲಿಸ್ಟ್ ನೀಡದ ಆರೋಪ: ಸೆಕ್ಟರ್ ಅಧಿಕಾರಿ ಹೆಗಡೆ ಅವರಿಗೆ ದೂರವಾಣಿ ಕರೆ ಮಾಡಿ ತರಾಟೆ
ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಮತ್ತೊಂದು ಗಲಾಟೆ ನಡೆದಿರುವ ಆರೋಪ ಕೇಳಿಬಂದಿದೆ. ನಗರದ ಪ್ರಜೆಂಟೆಶನ್ ಶಾಲೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ಚಿಂಚೂರೆ ಅವರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಮತದಾರರ ಪಟ್ಟಿಯನ್ನು ನೀಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿ ಹೆಗಡೆ ಅವರಿಗೆ ದೂರವಾಣಿ ಕರೆ ಮಾಡಿದ ಚಿಂಚೂರೆ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
‘ಆರ್‌ಎಸ್‌ಎಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದೀರಾ?’
ಮತದಾರರ ಪಟ್ಟಿಯನ್ನು ನೀಡದಿರುವ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ ಚಿಂಚೂರೆ, ಅಧಿಕಾರಿಗಳು ಆರ್‌ಎಸ್‌ಎಸ್ ಏಜೆಂಟ್‌ಗಳಂತೆ ಕೆಲಸ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರೂ ವೋಟರ್ ಲಿಸ್ಟ್ ನೀಡುತ್ತಿಲ್ಲ ಎಂಬುದು ಅವರ ಆರೋಪವಾಗಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಉಂಟಾಗಿರುವ ಈ ವಿವಾದ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಬೇಕಿದೆ.
