Karnataka Voice

Latest Kannada News

ಧಾರವಾಡ ಗ್ರಾಮೀಣ ಹೆಸ್ಕಾಂ AEE ಗುಲ್ಜಾರ‌ಅಹ್ಮದ ಮುಲ್ಲಾ ರೇಡ್… 25ಸಾವಿರ ಜೊತೆಗೆ ವಶಕ್ಕೆ…

Spread the love

ಧಾರವಾಡದಲ್ಲಿ ಲೋಕಾಯುಕ್ತ ಬಲೆ: 25 ಸಾವಿರ ರೂ. ಲಂಚ ಪಡೆಯುವಾಗ ಹೆಸ್ಕಾಂ ಎಇಇ ರೆಡ್‌ಹ್ಯಾಂಡ್ ಆಗಿ ಸೆರೆ!

ಧಾರವಾಡ: ರೈತನಿಂದ 25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಧಾರವಾಡ ಗ್ರಾಮೀಣ ಹೆಸ್ಕಾಂ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಗುಲ್ಜಾರ್ ಅಹ್ಮದ್ ಮುಲ್ಲಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಧಾರವಾಡದ ಎಸ್‌ಡಿಎಂ ಕಾಲೇಜು ಸಮೀಪ ರೈತ ಹಣುಮಂತರಾವ್ ಕುಲಕರ್ಣಿ ಎಂಬುವರಿಂದ ಲಂಚದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ರೈತರ ಫಾರ್ಮ್‌ಹೌಸ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವ ವಿಚಾರವಾಗಿ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ರೈತ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ದಾಳಿಯ ಬಳಿಕ ಎಇಇ ಗುಲ್ಜಾರ್ ಅಹ್ಮದ್ ಮುಲ್ಲಾ ಅವರನ್ನು ವಿದ್ಯಾಗಿರಿಯಲ್ಲಿರುವ ಹೆಸ್ಕಾಂ ಎಇಇ ಕಚೇರಿಗೆ ಕರೆದೊಯ್ದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಇದೇ ವೇಳೆ, ಲಂಚದ ಆರೋಪದ ಕುರಿತು ಅಧಿಕಾರಿಯನ್ನು ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರು ತೀವ್ರವಾಗಿ ಪ್ರಶ್ನಿಸಿದ್ದು, ಸರ್ಕಾರಿ ಕರ್ತವ್ಯ ನಿರ್ವಹಿಸಲು ಲಂಚ ಪಡೆಯುವ ಅಗತ್ಯವೇನಿತ್ತು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ತಹಶೀಲ್ದಾರ್ ಕುಚನೂರು ಅವರು ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದೀಗ ಮತ್ತೊಬ್ಬ ಸರ್ಕಾರಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವುದು ಜಿಲ್ಲೆಯ ಸರ್ಕಾರಿ ವಲಯದಲ್ಲಿ ಸಂಚಲನ ಮೂಡಿಸಿದೆ.

ಲಂಚದ ವಿರುದ್ಧ ಲೋಕಾಯುಕ್ತರ ಕಾರ್ಯಾಚರಣೆ ಮುಂದುವರಿದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


Spread the love

Leave a Reply

Your email address will not be published. Required fields are marked *

You may have missed