ಹೊರಟ್ಟಿ ಮಾಸ್ತರ್ ಎರಡನೇಯ ಬಾರಿ ಸಭಾಪತಿ..!
1 min readಬೆಂಗಳೂರು: ವಿಧಾನಪರಿಷತ್‍ನ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದರು. ಅಂತಿಮ ಹಂತದಲ್ಲಿ ನಜೀರ್ ಅಹ್ಮದ್ ಕಣದಿಂದ ಹಿಂದೆ ಸರಿದ ಹಿನ್ನೆಲೆ ಬಸವರಾಜ್ ಹೊರಟ್ಟಿ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಪರಿಷತ್ ನೂತನ ಸಭಾಪತಿಯಾಗಿ ಆಯ್ಕೆಯಾದ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅಭಿನಂದಿಸಿದರು.
ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಅಭಿನಂದಿಸಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ದೇಶಕ್ಕೆ ಮಾದರಿ ಮೇಲ್ಮನೆ ಎನಿಸಿದ ವಿಧಾನಪರಿಷತ್‍ನ ಸಭಾಪತಿಯಾಗಿ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿರುವುದು ಅವರ ಹಿರಿತನಕ್ಕೆ ಸಂದ ಗೌರವವಾಗಿದೆ. ಸತತ ಏಳು ಬಾರಿ ಗೆದ್ದು ದಾಖಲೆ ನಿರ್ಮಿಸಿರುವ ಹೊರಟ್ಟಿ, ಸಜ್ಜನ ರಾಜಕಾರಣಿ ಎಂದೇ ಹೆಸರಾಗಿದ್ದಾರೆ. ಅವರ ಅವಧಿಯಲ್ಲಿ ಬುದ್ದಿವಂತರ ಸದನವೆಂದೇ ಹೇಳಲಾಗುವ ಮೇಲ್ಮನೆಯಲ್ಲಿ ಅರ್ಥಪೂರ್ಣ ಚರ್ಚೆಯಾಗಿ ಸರ್ಕಾರಕ್ಕೆ ಸೂಕ್ತ ಸಲಹೆ ಮಾರ್ಗದರ್ಶನ ಸಿಗುವಂತಾಗಲಿ. ಅವರ ಅವಧಿಯಲ್ಲಿ ಸದನದ ಘನತೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.