ಹು-ಧಾ ಪಾಲಿಕೆ ಆಯುಕ್ತ ಸುರೇಶ ಇಟ್ನಾಳರಿಗೆ ಐಎಎಸ್ ಬಡ್ತಿ

ಬೆಂಗಳೂರು: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿರುವ ಹಿರಿಯ ಕೆಎಎಸ್ ಅಧಿಕಾರಿ ಸುರೇಶ ಇಟ್ನಾಳ ಅವರಿಗೆ ಇಂದು ಐಎಎಸ್ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.
ಇಂದು ಕೇಂದ್ರ ಸರಕಾರ ಕರ್ನಾಟಕದ ಒಟ್ಟು 23 ಕೆಎಎಸ್ ಅಧಿಕಾರಿಗಳಿಗೆ ಐಎಎಸ್ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಸುರೇಶ ಇಟ್ನಾಳ ಅವರು ಈ ಹಿಂದೆ ಬೆಳಗಾವಿಯಲ್ಲಿ ಅಪರ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಉತ್ತರಕನ್ನಡ ಜಿಲ್ಲೆ ಹಾಗೂ ಧಾರವಾಡ ಜಿಲ್ಲೆಯಲ್ಲೂ ಸೇವೆ ಸಲ್ಲಿಸಿದ್ದ ಸುರೇಶ ಇಟ್ನಾಳರವರು, ಮಹಾನಗರ ಪಾಲಿಕೆ ಆಯುಕ್ತರಾಗಿ ಉತ್ತಮ ಕೆಲಸ ಮಾಡುತ್ತ ಬಂದಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ಸುರೇಶ ಇಟ್ನಾಳ ಅವರು ಬಹುತೇಕ ವಿದ್ಯಾಭ್ಯಾಸವನ್ನ ಧಾರವಾಡದಲ್ಲಿ ಮುಗಿಸಿದ್ದು, ಮಹಾನಗರ ಪಾಲಿಕೆ ಆಯುಕ್ತರಾಗಿ ಬಂದ ನಂತರ ಹಲವು ಉತ್ತಮ ಕಾರ್ಯಗಳನ್ನ ನಡೆಸಲು ಅನುಕೂಲವಾಗಿದೆ.