ಬ್ಯಾಹಟ್ಟಿ ಜನರಲ್, ಶಿರಗುಪ್ಪಿ ಎಸ್ಸಿ, ಹೆಬಸೂರ ಜನರಲ್ ಮಹಿಳೆ: ಹುಬ್ಬಳ್ಳಿ ತಾಲೂಕಿನ ಗ್ರಾಪಂ ಕೆಟಗೇರಿ..

ಹುಬ್ಬಳ್ಳಿ: ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಹುಬ್ಬಳ್ಳಿ ತಾಲೂಕಿನ 26 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹುಬ್ಬಳ್ಳಿ ಸಾಂಸ್ಕೃತಿಕ ಭವನದಲ್ಲಿ ಇಂದು ಬೆಳಿಗ್ಗೆ ಗ್ರಾಮಪಂಚಾಯತ್ ನೂತನ ಸದಸ್ಯರ ಸಭೆ ಜರುಗಿಸಿ, ಅವರ ಸಮ್ಮುಖದಲ್ಲಿಯೇ ಮೀಸಲಾತಿ ನಿಗದಿಪಡಿಸಿ ಪ್ರಕಟಿಸಿದರು.
ಹುಬ್ಬಳ್ಳಿ ತಾಲೂಕಿನ 26 ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ವಿವರ:
ಗ್ರಾಮಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಶಹರ ತಹಶೀಲ್ದಾರ ಶಶಿಧರ ಮಾಡ್ಯಾಳ, ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆಯ ತಹಸಿದ್ದಾರ ಎಚ್.ಎನ್.ಬಡಿಗೇರ, ಡಿ.ಎನ್. ಕಸಮಳಗಿ, ವರುಣ ನಾಯ್ಕ, ರುದ್ರೇಶ ಎಮ್., ಜಿಲ್ಲಾ ಎನ್‍ಐಸಿ ಅಧಿಕಾರಿ ಮೀನಾಕುಮಾರಿ, ಸಹಾಯಕ ಅಧಿಕಾರಿ ರಾಜು ಸೇರಿದಂತೆ ಇತರರು ಭಾಗವಹಿಸಿ ಕರ್ತವ್ಯ ನಿರ್ವಹಿಸಿದರು.