ಧಾರವಾಡ ಭೀಕರ ಅಪಘಾತ ಟ್ವೀಟ್ ಮೂಲಕ ನರೇಂದ್ರ ಮೋದಿ ಸಂತಾಪ

ಧಾರವಾಡ: ತಾಲೂಕಿನ ಇಟಿಗಟ್ಟಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ ಎಂದು ಟ್ವೀಟ್ ಮಾಡಿದ್ದಾರೆ.
ದಾವಣಗೆರೆಯಿಂದ ಗೋವಾಗೆ ಹೋಗುತ್ತಿದ್ದ ಟೆಂಪೋಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಹೆಚ್ಚು ಮಹಿಳೆಯರೇ ಇದ್ದ ಟೆಂಪೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿ 11 ಜನರು ಸಾವಿಗೀಡಾಗಿದ್ದಾರೆ. ಇನ್ನು ಕೆಲವರ ಸ್ಥಿತಿ ಚಿಂತಾಜಕವಾಗಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡುವ ಮೂಲಕ ಕುಟುಂಬಗಳಲ್ಲಿ ಧೈರ್ಯ ತುಂಬುವ ಕೆಲಸವನ್ನ ಮಾಡಿದ್ದಾರೆ.