ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ
1 min readಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್‍ಗೌಡ ಹತ್ಯೆ ಕೇಸ್‍ಗೆ ಸಂಬಂಧಿಸಿದಂತೆ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.
ಹೌದು.. ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡ ಹಿನ್ನೆಲೆ ಮತ್ತೆ ಕೋರ್ಟ್‍ನಲ್ಲಿ ವಿಚಾರಣೆ ನಡೆದಿತ್ತು. ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಸಿಬಿಐ ವಿಶೇಷ ಕೋರ್ಟ್, 2 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಬಂಧನದ ಅವಧಿಯನ್ನು ಇನ್ನೂ 14 ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಿದೆ.
ಜನವರಿ 22ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ, ಧಾರವಾಡದ ಸಿಬಿಐ ವಿಶೇಷ ಕೋರ್ಟ್‍ನಿಂದ ಆದೇಶ ಹೊರಡಿಸಲಾಗಿದೆ. ಒಟ್ಟಾರೆ ಇನ್ನು ಮತ್ತೆ 14 ದಿನಗಳ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹಿಂಡಲಗಾ ಜೈಲೇ ಗತಿಯಾಗಿದೆ.
ವಿನಯ ಕುಲಕರ್ಣಿ ಪರವಾಗಿ ಈಗಾಗಲೇ ಹೈಕೋರ್ಟನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿರುವುದರಿಂದ, ಅಲ್ಲಿ ಜಾಮೀನು ಸಿಗದೇ ಇರುವುದರಿಂದ ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನವನ್ನ ವಿಸ್ತರಣೆ ಮಾಡಿದೆ.